ಎಫೆಸದವರಿಗೆ 2:3 - ಕನ್ನಡ ಸತ್ಯವೇದವು C.L. Bible (BSI)3 ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅದ್ದಿ ಅಮಿ ಸಗ್ಳ್ಯೆಬಿ ತ್ಯಾ ಲೊಕಾಂಚ್ಯಾ ಸಾರ್ಕೆಚ್ ಅಮ್ಚ್ಯಾ ಸ್ವಾಭಾವಿಕ್ ಆಶ್ಯಾ ಸಾರ್ಕೆ ಚಲುಲಾಗಲಾಂವ್, ಅಮ್ಚ್ಯಾ ಮನಾನ್ ಅನಿ ಆಂಗಾಕ್ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಕರುಲಾಗಲಾಂವ್, ಅಮ್ಚ್ಯಾ ತ್ಯಾ ಸ್ವಾಭಾವಿಕ್ ಹಂತಾಕ್ ಅಮಿ ಸಗ್ಳ್ಯಾಂಚ್ಯಾ ಸಾರ್ಕೆ ದೆವಾಚ್ಯಾ ರಾಗಾತ್ ಪಡಲೆ ಹೊತ್ತಾಂವ್. ಅಧ್ಯಾಯವನ್ನು ನೋಡಿ |