Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ದೆವಾಚಿ ದಯಾ ಲೈ ಮೊಟಿ, ಅನಿ ಅಮ್ಚ್ಯಾ ಸಾಟ್ನಿ ತೆನಿ ದಾಕ್ವಲ್ಲೊ ಪ್ರೆಮ್ ಲೈ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:4
34 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು