Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಖಾಯ್ಲ್ ಹೊವ್ನ್ ಚಲಿನಸಲ್ಲ್ಯಾಕ್ ಲಾಗುನ್ ಆತ್ಮಿಕ್ ರಿತಿನ್ ಮರುನ್ ಗೆಲ್ಲಾಂವ್, ತನ್ನಾ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಮ್ಕಾ ಝಿತ್ತೆ ಕರ್ಲ್ಯಾನ್ ಹೆ ತುಮಿ ಬಚಾವ್ ಹೊಲ್ಲೆ ದೆವಾಚ್ಯಾ ಕುರ್ಪೆ ವೈನಾಚ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:5
20 ತಿಳಿವುಗಳ ಹೋಲಿಕೆ  

ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.”


ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ !


ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು