Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:7 - ಕನ್ನಡ ಸತ್ಯವೇದವು C.L. Bible (BSI)

7 ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಈ ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಅಮ್ಕಾ ಕ್ರಿಸ್ತಾ ಜೆಜುಚ್ಯಾ ವೈನಾ ಹ್ಯಾ ಕಾಲಾರ್ ಅನಿ ಸಗ್ಳ್ಯಾ ಕಾಲಾರ್ ಯೆತಲ್ಯಾ ತೆಚ್ಯಾ ಸಾಂಗುಕ್ ಹೊಯ್ನಾ ತಸ್ಲ್ಯಾ ಮೊಟ್ಯಾಪಾನಾಚಿ ತೆಚಿ ಕುರ್ಪಾ ಅನಿ ಪ್ರೆಮ್‍ ದಾಕ್ವುನ್ ದಿವ್‍ ಸಾಟ್ನಿ ತೆನಿ ಅಸೆ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:7
13 ತಿಳಿವುಗಳ ಹೋಲಿಕೆ  

ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.


ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು