Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:9 - ಕನ್ನಡ ಸತ್ಯವೇದವು C.L. Bible (BSI)

9 ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮಗೆ ರಕ್ಷಣೆ ದೊರೆತದ್ದು ನಿಮ್ಮ ಒಳ್ಳೆಯ ಕಾರ್ಯಗಳಿಂದಲ್ಲ. ಆದ್ದರಿಂದ ತನ್ನನ್ನು ತಾನೇ ರಕ್ಷಿಸಿಕೊಂಡಿರುವುದಾಗಿ ಯಾರೂ ಹೊಗಳಿಕೊಳ್ಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆ ತುಮ್ಚ್ಯಾ ಬರ್‍ಯಾ ಕಾಮಾಂಚ್ಯಾ ವೈನಾ ಹೊಲ್ಲೆ ನ್ಹಯ್ ತಸೆ ಮನುನ್ ಕೊನ್ಬಿ ತೆಚ್ಯಾ ವಿಶಯಾತ್ ಮೊಟೆ ಪಾನ್ ಬೊಲುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:9
9 ತಿಳಿವುಗಳ ಹೋಲಿಕೆ  

ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ದೇವರ ದಯೆ ದೊರಕುವುದು ಮಾನವನ ಇಚ್ಛೆಯಿಂದಲ್ಲ, ಅವನ ಪ್ರಯತ್ನದಿಂದಲೂ ಅಲ್ಲ. ಅದು ದೊರಕುವುದು ದೇವರ ಕರುಣೆಯಿಂದಲೇ.


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು