Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:10 - ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10-11 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಸೆ ಅತ್ತಾಚ್ಯಾ ಯೆಳಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವೈನಾ, ಸರ್ಗಾಚ್ಯಾ ರಾಜಾತ್ಲ್ಯಾ ಮುಖಂಡಾನಿ ಅನಿ ಅಧಿಕಾರ್ಯ್ಯಾನಿ ಎಕ್ ದುಸ್ರ್ಯಾಚ್ ರಿತಿನ್ ತೆಜೆ ಶಾನ್ಪಾನ್ ಶಿಕುಚೆ ಮನುನ್ ತೆಜೊ ಉದ್ದೆಶ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:10
23 ತಿಳಿವುಗಳ ಹೋಲಿಕೆ  

ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು