Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:11 - ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅನಾದಿಕಾಲದಿಂದಲೂ ಇದೇ ದೇವರ ಯೋಜನೆಯಾಗಿತ್ತು. ದೇವರು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ತನ್ನ ಯೋಜನೆಗನುಸಾರವಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವಾನ್ ಅಮ್ಚ್ಯಾ ಧನಿಯಾ ಕ್ರಿಸ್ತ್ ಜೆಜುಚ್ಯಾ ವೈನಾ ಅಪ್ನಿ ಫುರಾ ಕರಲ್ಲ್ಯಾ ಶಾಸ್ವತ್ ಉದ್ದೆಸಾಚ್ಯಾ ಸಾರ್ಕೆ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:11
12 ತಿಳಿವುಗಳ ಹೋಲಿಕೆ  

ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು