Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:13 - ಕನ್ನಡ ಸತ್ಯವೇದವು C.L. Bible (BSI)

13 ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನಿಮ್ಮ ನಿವಿುತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನವನ್ನು ಉಂಟುಮಾಡುತ್ತವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆ ಹೊವ್ನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ ತುಮ್ಚ್ಯಾ ಸಾಟ್ನಿ ಮಿಯಾ ಕಸ್ಟ್ ಸೊಸ್ತಲೆ ಬಗುನ್ ಧೈರೊ ಸೊಡುನಕಾಸಿ ಕಶ್ಯಾಕ್ ಮಟ್ಲ್ಯಾರ್, ಹೆ ಸಗ್ಳ್ಯೆ ತುಮ್ಚ್ಯಾ ಫಾಯ್ದ್ಯಾ ಸಾಟ್ನಿ ಹೊವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:13
14 ತಿಳಿವುಗಳ ಹೋಲಿಕೆ  

ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.”


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು