Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:15 - ಕನ್ನಡ ಸತ್ಯವೇದವು C.L. Bible (BSI)

15 ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಭೂಪರಲೋಕಗಳಲ್ಲಿರುವ ಪ್ರತಿಯೊಂದು ಕುಟುಂಬವು ಆತನಿಂದ ತನ್ನ ನಿಜ ಹೆಸರನ್ನು ಪಡೆದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹ್ಯಾ ಜಗಾತ್, ಅನಿ ಸರ್‍ಗಾತ್ ಹೊತ್ತ್ಯಾ ಹರ್ ಎಕ್ ಘರಾನೆ ತೆಜ್ಯಾಕ್ನಾ ಖರೆ ನಾವ್ ಘೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:15
13 ತಿಳಿವುಗಳ ಹೋಲಿಕೆ  

ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು