Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:5 - ಕನ್ನಡ ಸತ್ಯವೇದವು C.L. Bible (BSI)

5 ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಫಾಟಿ ಮಾನ್ಸಾಕ್ನಿ ಹ್ಯೊ ಗುಟ್ ಸಾಂಗುನ್ ಹೊವ್ಕ್ ನಾ, ಖರೆ ದೆವಾನ್ ಅತ್ತಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅಪ್ನಾಚ್ಯಾ ಪವಿತ್ರ್ ಅಪೊಸ್ತಲಾಕ್ನಿ ಅನಿ ಪ್ರವಾದಿಯಾಕ್ನಿ ದಾಕ್ವುನ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:5
24 ತಿಳಿವುಗಳ ಹೋಲಿಕೆ  

ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.


ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು