ಎಫೆಸದವರಿಗೆ 3:8 - ಕನ್ನಡ ಸತ್ಯವೇದವು C.L. Bible (BSI)8 ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8-9 ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ದೆವಾಚ್ಯಾ ಸಗ್ಳ್ಯಾ ಲೊಕಾತ್ನಿ ಮಿಯಾ ಸಗ್ಳ್ಯಾಕಿಂತಾ ಕನಿಸ್ಟ್ ಹೊಲ್ಯಾರ್ಬಿ ದೆವಾನ್ ಮಾಕಾ ಕ್ರಿಸ್ತಾಚಿ ಮೆಜುಕ್ ಹೊಯ್ನಾ ತವ್ಡಿ ಸಾವ್ಕಾರ್ಕಿಚ್ಯಾ ವಿಶಯಾತ್ಲಿ ಬರಿ ಖಬರ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿಕ್ಡೆ ಘೆವ್ನ್ ಜಾತಲೊ ಅವಕಾಸ್ ದಿಲ್ಯಾನ್. ಅಧ್ಯಾಯವನ್ನು ನೋಡಿ |