Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:9 - ಕನ್ನಡ ಸತ್ಯವೇದವು C.L. Bible (BSI)

9 ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಹಸ್ಯವಾಗಿದ್ದ ತನ್ನ ಯೋಜನೆಯನ್ನು ಜನರೆಲ್ಲರಿಗೆ ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಆದಿಯಿಂದಲೂ ಅದು ದೇವರಲ್ಲಿ ಮರೆಯಾಗಿತ್ತು. ಪ್ರತಿಯೊಂದನ್ನೂ ಸೃಷ್ಟಿಸಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಸಗ್ಳ್ಯಾ ಲೊಕಾಕ್ನಿ ದೆವಾಚಿ ಗುಟ್ಟಾಚಿ ಯೆವ್ಜನ್ ಕಸ್ಲಿ ಮನುನ್ ಅನಿ ತಿ ಪರಿನಾಮ್ ಪಡಿಸಾರ್ಕೆ ಹೊತೆಲೆ ಬಗಿಸಾರ್ಕೆ ಕರ್ಲ್ಯಾನ್. ಸಗ್ಳ್ಯೆ ರಚಲ್ಯಾ ದೆವಾನ್ ಅದ್ಲ್ಯಾ ಸಗ್ಳ್ಯಾ ಎಳಾತ್ನಿ ಅಪ್ನಾಚೊ ಗುಟ್ ಧಾಪುನ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:9
38 ತಿಳಿವುಗಳ ಹೋಲಿಕೆ  

ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು