Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:10 - ಕನ್ನಡ ಸತ್ಯವೇದವು C.L. Bible (BSI)

10 ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಳಿದು ಬಂದವನು ಮೇಲಣ ಎಲ್ಲಾ ಲೋಕಗಳಿಗಿಂತ ಉನ್ನತವಾಗಿ ಏರಿಹೋದವನೇ. ಆದದರಿಂದ ಸಮಸ್ತ ಲೋಕಗಳನ್ನು ತುಂಬಿದವನಾದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಭೂಮಿಯ ಅಧೋಭಾಗಕ್ಕೆ ಇಳಿದುಹೋಗಿ, ಅಲ್ಲಿಂದ ಆಕಾಶದ ಅತ್ಯುನ್ನತಸ್ಥಾನಕ್ಕೆ ಏರಿಹೋದನು ಎಂದರ್ಥ. ಸಮಸ್ತದಲ್ಲಿ ತಾನೇ ತುಂಬಿರಬೇಕೆಂದು ಕ್ರಿಸ್ತನು ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚ್ಯಾ ಸಾಟ್ನಿ ಆಕಾಶ್ ಮಂಡಳಾಚ್ಯಾ ವೈರ್ ಸಗ್ಳ್ಯಾಕ್ಡೆ ಅಪ್ನಾಚೆ ಹಾಜಿರ್ಪಾನ್ ಭರುಕ್ ಸಾಟ್ನಿ ಉತ್ರುನ್ ಎಲ್ಲೊಚ್ ವೈರ್ ಚಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:10
24 ತಿಳಿವುಗಳ ಹೋಲಿಕೆ  

ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ಇದೆಲ್ಲವೂ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ನಿಮಗೆ ಒತ್ತಿ ಹೇಳುತ್ತೇನೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.


ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು