Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:11 - ಕನ್ನಡ ಸತ್ಯವೇದವು C.L. Bible (BSI)

11 ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆನೆ ದಿತಲೊ ತೊಚ್ ತೊ ಉಲ್ಲ್ಯಾಕ್ನಿ ಅಪೊಸ್ತಲಾ, ಅನಿ ಉಲ್ಲ್ಯಾಕ್ನಿ ಪ್ರವಾದಿ, ಅನಿ ಉಲ್ಲ್ಯಾಕ್ನಿ ಬರಿ ಖಬರ್ ಸಾಂಗ್ತಲೆ ಅನಿ ಉಲ್ಲ್ಯಾಕ್ನಿ ತಾಂಡ್ಯಾಚಿ ಮುಖಂಡಾ ಅನಿ ಶಿಕ್ವುತಲೆ ಕರುನ್ ಎಚುನ್ ಕಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:11
19 ತಿಳಿವುಗಳ ಹೋಲಿಕೆ  

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಮಾರನೆಯ ದಿನ ಅಲ್ಲಿಂದ ಹೊರಟು ಸೆಜರೇಯಕ್ಕೆ ಬಂದೆವು. ಅಲ್ಲಿ ಶುಭಸಂದೇಶ ಪ್ರಚಾರಕ ಫಿಲಿಪ್ಪನ ಮನೆಗೆ ಹೋಗಿ ಅವನೊಡನೆ ತಂಗಿದೆವು. ಜೆರುಸಲೇಮಿನಲ್ಲಿ ಆಯ್ಕೆಯಾದ ಏಳುಮಂದಿಯಲ್ಲಿ ಇವನೂ ಒಬ್ಬನು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.


ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ.


ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು