ಎಫೆಸದವರಿಗೆ 4:12 - ಕನ್ನಡ ಸತ್ಯವೇದವು C.L. Bible (BSI)12 ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹೆ ಸಗ್ಳೆ ತೆನಿ ಸೆವೆಚ್ಯಾ ಕಾಮಾ ಸಾಟ್ನಿ ದೆವಾಚ್ಯಾ ಲೊಕಾಕ್ನಿ ತಯಾರ್ ಕರುಕ್ ಮನುನ್ ಹೆಕಾ ಅಸೆ ಕರ್ಲ್ಯಾನ್, ಅಧ್ಯಾಯವನ್ನು ನೋಡಿ |
ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.