ಎಫೆಸದವರಿಗೆ 4:14 - ಕನ್ನಡ ಸತ್ಯವೇದವು C.L. Bible (BSI)14 ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆ ರಾತಾನಾ ಅಮಿ ಅನಿ ಫಿಡೆ ಪೊರಾಂಚ್ಯಾ ಸಾರ್ಕೆ ಹೊವ್ಚೆ ನ್ಹಯ್ ಪಶ್ವುತಲ್ಯಾ ಲೊಕಾಂಚ್ಯಾ ಶಿಕಾಪಾಂಚ್ಯಾ ವಾರ್ಯ್ಯಾಕ್ ಹುಡುನ್ ಜಾತಲೆ ಹೊವ್ನ್ ರ್‍ಹಾವ್ಚೆ ನ್ಹಯ್, ತೆನಿ ಲೊಕಾಕ್ನಿ ಅಪ್ನಾಚ್ಯಾ ಚಾಲಾಕಿ ಪಾನಾತ್ ಅನಿ ಶಾನೆಪಾನಾನ್ ಚುಕ್ ವಾಟೆಕ್ ನ್ಹೆತಾತ್. ಅಧ್ಯಾಯವನ್ನು ನೋಡಿ |