Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:2 - ಕನ್ನಡ ಸತ್ಯವೇದವು C.L. Bible (BSI)

2 ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ಕನ್ನಾಬಿ ಖಾಲ್ತಿ ಹೊವ್ನ್ ಸಾದೆ ಅನಿ ಸೊಸುನ್ ಘೆವ್ನ್ ರಾತಲೆ ಹೊವಾ ಅನಿ ಎಕಾಮೆಕಾಕ್ ಪ್ರೆಮಾನ್ ಸಂಬಾಳುನ್ಗೆವ್ನ್ ಜಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:2
28 ತಿಳಿವುಗಳ ಹೋಲಿಕೆ  

ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.


ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು