Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:22 - ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಹೊವ್ನ್, ತುಮ್ಕಾ ಶಿಕ್ವಲ್ಲೆ ಕಾಯ್ ಮಟ್ಲ್ಯಾರ್, ತುಮಿ ತುಮ್ಚೆ ಅದ್ಲೊ ಬುರ್ಶೊ ಗುನ್ ಸೊಡುನ್ ದಿವ್ಚೆ ಮನುನ್ ಮಟ್ಲ್ಯಾರ್ ತುಮ್ಚೊ ಜನ್ನೊ ಸ್ವಬಾವ್ ಕಾಡುನ್ ಟಾಕುಚೆ ಮನ್ತಲೆ ಶಿಕುನ್ ಘೆಟ್ಲ್ಯಾಸಿ ಲೊಕಾ ಅಪ್ನಿ ಕರ್ತಲ್ಯಾ ಬುರ್ಶ್ಯಾ ಕಾಮಾಂಚ್ಯಾ ವೈನಾ ಪಸೆತ್ ಪಡಲ್ಯಾ ಸಾಟ್ನಿ ತೊ ಅದ್ಲೊ ಸ್ವಬಾವ್ ದಿಸ್ ಗೆಲೊಸೊ ಹಾಳ್ ಹೊಯ್ತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:22
27 ತಿಳಿವುಗಳ ಹೋಲಿಕೆ  

ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.


“ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೆ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟುಹೋಗಲಿ,” ಎಂದನು.


ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಅದರಿಂದಲೇ ನನ್ನನ್ನು ಕೊಂದುಹಾಕಿತು.


ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು