Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:24 - ಕನ್ನಡ ಸತ್ಯವೇದವು C.L. Bible (BSI)

24 ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ತುಮ್ಕಾಚ್ ತುಮಿ ನ್ಹವ್ಯಾ ಸ್ವಭಾವಾನ್ ನೆಸುನ್ ಘೆವಾ, ತೊ ಸ್ವಬಾವ್ ದೆವಾಚ್ಯಾ ರುಪಾಕ್ ಖರಿ ನಿತ್ ಹೊವ್ನ್ ಪವಿತ್ರ್ ಹೊವ್ನ್ ತಯಾರ್ ಕರಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:24
30 ತಿಳಿವುಗಳ ಹೋಲಿಕೆ  

ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ.


ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಏಕೆಂದರೆ, ಅಳಿದುಹೋಗುವ ಶರೀರ ಅಮರತ್ವವನ್ನು ಧರಿಸಲೇಬೇಕು. ಮರ್ತ್ಯವಾದ ಶರೀರ ಅಮರತ್ವವನ್ನು ಧರಿಸಲೇಬೇಕು.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.


ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II


ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು