Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:25 - ಕನ್ನಡ ಸತ್ಯವೇದವು C.L. Bible (BSI)

25 ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆ ಹೊವ್ನ್, ತುಮಿ ಝುಟೆ ಸಾಂಗಿನಸ್ತಾನಾ ಎಕಾಮೆಕಾಕ್ ಕನ್ನಾಬಿ ಖರೆಚ್ ಬೊಲುನ್ಗೆತ್ ರಾವಾ, ಕಶ್ಯಾಕ್ ಮಟ್ಲ್ಯಾರ್ ಅಮಿ ಸಗ್ಳ್ಯೆಬಿ ಎಕುಚ್ ಆಂಗಾಚಿ ಭಾಗಾ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:25
42 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.


“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.


ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.


ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.


ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.


ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.


ನನ್ನ ಬಾಯಿಂದ ಬರುತ್ತಿರುವುದು ಸತ್ಯ ನನ್ನ ತುಟಿಗೆ ದುಷ್ಟತನ ಅಸಹ್ಯ.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.


ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.


ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.


ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.


ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ I ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ II


ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


ನೆರೆಯವನಿಗೆ ವಿರುದ್ಧ ಆಧಾರವಿಲ್ಲದ ಸಾಕ್ಷಿಹೇಳಬೇಡ; ಮಾತಿನಲ್ಲಿ ಅವನಿಗೆ ಮೋಸಮಾಡಬೇಡ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು