Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:29 - ಕನ್ನಡ ಸತ್ಯವೇದವು C.L. Bible (BSI)

29 ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತುಮ್ಚ್ಯಾ ತೊಂಡಾತ್ನಾ ಬುರ್ಶಿ ಗೊಸ್ಟಿಯಾ ಯೆಯ್ ನಸ್ತಾನಾ ರ್‍ಹಾಂವ್ದಿತ್, ಖರೆ ಎಕ್ವಟ್ಟ್ ಭಾಂದುಕ್ ಅನಿ ಬರ್‍ಯಾಚಿ ಗೊಸ್ಟಿಯಾ ರಾಲ್ಯಾರ್ ಆಯಿಕ್ತಲ್ಯಾಂಚ್ಯಾ ಬರ್‍ಯಾಸಾಟಿ ಬೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:29
41 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ.


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೇ ಬಯಸಿ, ವಿಶ್ವಾಸದಲ್ಲಿ ಅವನು ಮತ್ತಷ್ಟು ಪ್ರವರ್ಧಿಸುವಂತೆ ನೆರವಾಗಬೇಕು.


ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು