Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:3 - ಕನ್ನಡ ಸತ್ಯವೇದವು C.L. Bible (BSI)

3 ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಕಾ ಎಕಾಕ್ಡೆ ಭಾಂದ್ತಲ್ಯಾ ಶಾಂತಿಚ್ಯಾ ವೈನಾ ಪವಿತ್ರ್ ಆತ್ಮೊ ದಿತಲ್ಯಾ ಎಕ್ವಟ್ಟಾಕ್ ತುಮ್ಚ್ಯಾನ್ ಹೊತಾ ತವ್ಡೆ ಬರೆ ಕರುನ್ ಸಂಬಾಳುನ್ ಥವ್ಕ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:3
16 ತಿಳಿವುಗಳ ಹೋಲಿಕೆ  

ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.


ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ತಲೆದೂರಿಸುವುದಕ್ಕೆ ಇರುವ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಹಾಕಿಸಬೇಕು.


ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.


ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು