Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:32 - ಕನ್ನಡ ಸತ್ಯವೇದವು C.L. Bible (BSI)

32 ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಎಕಾಮೆಕಾಕ್ ಕಾಳ್ಜಿ ದಾಕ್ವಾ , ಎಕಾಮೆಕಾಚೊ ಪ್ರೆಮ್ ಕರಾ, ದೆವಾನ್ ಕ್ರಿಸ್ತಾಕ್ನಾ ತುಮ್ಕಾ ಮಾಪಿ ಕರಲೆ ಸಾರ್ಕೆ ತುಮಿಬಿ ಎಕಾಮೆಕಾಕ್ ಮಾಪಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:32
34 ತಿಳಿವುಗಳ ಹೋಲಿಕೆ  

ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.


ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II


ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.


ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಅಲ್ಲಿಯ ನಿವಾಸಿಗಳು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆ ಹೊಯ್ದು ಚಳಿಯಾಗುತ್ತಿದ್ದುದರಿಂದ ಅವರು ಬೆಂಕಿಮಾಡಿ ನಮ್ಮೆಲ್ಲರನ್ನು ಬರಮಾಡಿಕೊಂಡರು.


ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ!


ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.


“ಹಳೆಯ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು