Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:9 - ಕನ್ನಡ ಸತ್ಯವೇದವು C.L. Bible (BSI)

9 ‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 (ಏರಿಹೋದನೆಂದು ಹೇಳಿದ್ದರಲ್ಲಿ ಭೂವಿುಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಸೆ ರಾತಾನಾ ತೊ ವೈಲ್ಯಾ ಜಾಗ್ಯಾರ್ ಗೆಲೊ ಮಟ್ಲ್ಯಾರ್, ಅರ್ಥ್ ಕಾಯ್? ತಸೆ ಮಟ್ಲ್ಯಾರ್ ಜಿಮ್ನಿಚ್ಯಾ ಖೊಲಾತ್ಲ್ಯಾ ಜಾಗಾರ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:9
22 ತಿಳಿವುಗಳ ಹೋಲಿಕೆ  

ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ಕೇಡು ಬಗೆಯುವವರು ನನ್ನ ಪ್ರಾಣಕೆ I ಇಳಿದು ಹೋಗುವರು ಅಧೋಲೋಕಕೆ II


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II


ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.


ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;


ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.


ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ನನ್ನ ಅಸ್ಥಿಪಂಜರವನು ರೂಪಿಸುವಾಗ I ತಾಯಗರ್ಭದೊಳು ಅಚ್ಚರದಿ ರಚಿಸುವಾಗ I ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I ಮರೆಯಾಗಿರಲಿಲ್ಲ ನಾನು ನಿನಗಾಗ II


ಸರ್ವೇಶ್ವರ ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದರು. ಅವರು, “ಬೆಟ್ಟದ ತುದಿಗೆ ಬಾ,” ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು