Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:11 - ಕನ್ನಡ ಸತ್ಯವೇದವು C.L. Bible (BSI)

11 ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಾಳ್ಕಾತ್ಲಿ ಲೊಕಾ ಕರ್ತಲಿ ಕಾಮಾ ಕರುನಕಾಸಿ ತೆಜ್ಯಾನ್ ಕಾಯ್ಬಿ ಬರೆ ಹೊಯ್ನಾ, ಖರೆ ಕಳ್ಕಾತ್ ಕರ್ತಲಿ ಕಾಮಾ ಚುಕೆಚಿ ಮನುನ್ ದಾಕ್ವುಕ್ ಸಾಟ್ನಿ ತುಮಿ ಬರಿ ಕಾಮಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:11
48 ತಿಳಿವುಗಳ ಹೋಲಿಕೆ  

ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ನಿದ್ರೆಯೂ ಕುಡುಕತನವೂ ರಾತ್ರಿಗೆ ಸಂಬಂಧಿಸಿದವುಗಳು.


ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು.


ಅಂಥವರ ಸಹವಾಸವೇ ನಿಮಗೆ ಬೇಡ.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”


ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.


ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.


“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.


ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು