Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:12 - ಕನ್ನಡ ಸತ್ಯವೇದವು C.L. Bible (BSI)

12 ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತಕಾರ್ಯಗಳ ಬಗ್ಗೆ ಮಾತಾಡುವುದಕ್ಕೂ ನಾಚಿಕೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆಚ್ ಬಿ ತಿ ಲೊಕಾ ಕರ್ತಲ್ಯಾ ಗುಟ್ಟಾಚ್ಯಾ ಕಾಮಾಂಚ್ಯಾ ವಿಶಯಾತ್ ಬೊಲುಕ್‍ಬಿ ಮರ್ಯಾದ್ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:12
12 ತಿಳಿವುಗಳ ಹೋಲಿಕೆ  

ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನೀನು ಅದನ್ನು ಗುಪ್ತವಾಗಿ ಮಾಡಿದೆ. ನಾನು ಹೇಳುವ ಮಾತಾದರೋ ಇಸ್ರಯೇಲರೆಲ್ಲರ ಮುಂದೆ ಬಹಿರಂಗವಾಗಿ ನೆರವೇರುವುದು,’” ಎಂದನು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


“ಕದ್ದ ನೀರು ಸಿಹಿ, ಗುಟ್ಟಾಗಿ ತಿನ್ನುವ ರೊಟ್ಟಿ ರುಚಿ” ಎಂದು ಬುದ್ಧಿಹೀನನಿಗೆ ಹೇಳುವಳು.


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು