Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:19 - ಕನ್ನಡ ಸತ್ಯವೇದವು C.L. Bible (BSI)

19 ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಿರ್ತನ್ಯಾನಿ, ಗಿತಾನಿ, ಅನಿ ಆತ್ಮಿಕ್ ಗಿತಾನಿ ಎಕಾಮೆಕಾಕ್ ಬೊಲುನ್ಗೆತ್ ರಾವಾ ತುಮ್ಚ್ಯಾ ಮನಾತ್ನಿ ಧನಿಯಾಕ್ ವಾಜಾಪಾ ವಾಜ್ವುನ್ಗೆತ್ ಗಿತಾ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:19
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಧನ್ಯವಾದವಿತ್ತು ಹಾಡಿರಿ ಪ್ರಭುವನು I ಕಿನ್ನರಿಯೊಡನೆ ಭಜಿಸಿರಿ ನಮ್ಮ ದೇವನನು II


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ.


ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ


ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು