Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:20 - ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಹರ್ ಎಕ್ ವಿಶಯಾತ್ನಿ ಆಮ್ಚ್ಯಾ ಬಾಬಾ ದೆವಾಕ್ ಅಮ್ಚೊ ಧನಿ ಜೆಜುಕ್ರಿಸ್ತಾಚ್ಯಾ ನಾವಾನ್ ಕನ್ನಾಬಿ ಧನ್ಯವಾದ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:20
22 ತಿಳಿವುಗಳ ಹೋಲಿಕೆ  

ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.


ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.


ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು