Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:23 - ಕನ್ನಡ ಸತ್ಯವೇದವು C.L. Bible (BSI)

23 ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಟಕ್ಲೆ ಹೊವ್ನ್ ಹೊತ್ತ್ಯಾ ಸಾರ್ಕೊ ಘವ್ ಮಾನುಸ್ ಬಾಯ್ಕೊಮಾನ್ಸಿಕ್ ಟಕ್ಲೆ ಹೊವ್ನ್ ಹಾಯ್, ದೆವಾಚ್ಯಾ ಲೊಕಾಂಚೊ ತಾಂಡೊ ಕ್ರಿಸ್ತಾಚೆ ಆಂಗ್ ಹೊವ್ನ್ ಹಾಯ್, ಕ್ರಿಸ್ತ್ ತ್ಯಾ ಆಂಗಾಚೊ ರಾಕ್ವನ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:23
11 ತಿಳಿವುಗಳ ಹೋಲಿಕೆ  

ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು