Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:25 - ಕನ್ನಡ ಸತ್ಯವೇದವು C.L. Bible (BSI)

25-26 ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಘವಾನು ಅಪ್ಲ್ಯಾ ಅಪ್ಲ್ಯಾ ಬಾಯ್ಕಾಂಚೊ ಪ್ರೆಮ್ ಕರಾ, ಕಸೊ ಕ್ರಿಸ್ತಾನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಪ್ರೆಮ್ ಕರುನ್ ತೆಚ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಲ್ಯಾ ಸಾರ್ಕೆ ತುಮಿ ಬಿ ತುಮ್ಚ್ಯಾ ಬಾಯ್ಕೊಕ್ ಪ್ರೆಮ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:25
21 ತಿಳಿವುಗಳ ಹೋಲಿಕೆ  

ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ಪುರುಷರೇ, ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಅವರೊಡನೆ ಕಠಿಣವಾಗಿ ವರ್ತಿಸದಿರಿ.


ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.


ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡು ತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೆ ಮಗುವಿನಂತೆ ಅವನ ಸಂಗಡ ಹಾಗೂ ಅವನ ಮಕ್ಕಳ ಸಂಗಡವೆ ಬೆಳೆಯುತ್ತಿತ್ತು. ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆಮಾಡುತ್ತಿತ್ತು.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು.


ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು