Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:28 - ಕನ್ನಡ ಸತ್ಯವೇದವು C.L. Bible (BSI)

28 ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ಪುರುಷರು ತಮ್ಮ ಸ್ವಂತ ದೇಹಗಳನ್ನು ಪ್ರೀತಿಸುವಂತೆ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತಸೆ ಹೊವ್ನ್, ಘವಾನಿ ಅಪ್ಲ್ಯಾ ಸ್ವತಾಚ್ಯಾ ಆಂಗಾಕ್ ಪ್ರೆಮ್ ಕರಲ್ಯಾ ಸಾರ್ಕೆಚ್ ಅಪ್ಲ್ಯಾ ಬಾಯ್ಕೊಕ್ಬಿ ಪ್ರೆಮ್ ಕರುಚೆ ಅಪ್ಲ್ಯಾ ಬಾಯ್ಕೊಕ್ ಪ್ರೆಮ್ ಕರ್ತಲೊ ಹರ್ ಎಕ್ಲೊಬಿ ಅಪ್ನಾಕುಚ್ ಪ್ರೆಮ್ ಕರುನ್ ಘೆತಲೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:28
7 ತಿಳಿವುಗಳ ಹೋಲಿಕೆ  

ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.


‘ಈ ಕಾರಣದಿಂದಲೇ ಗಂಡನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎಂದೂ ಹೇಳಿದ್ದಾರೆಂಬುದಾಗಿ ನೀವು ಪವಿತ್ರ‍ ಗ್ರಂಥದಲ್ಲಿ ಓದಿಲ್ಲವೇ?


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದು ಕೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗಿರುವರು.”


ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.


ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು