Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:4 - ಕನ್ನಡ ಸತ್ಯವೇದವು C.L. Bible (BSI)

4 ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೊಲಸು ಮಾತು ಹುಚ್ಚು ಮಾತು ಕುಚೋದ್ಯ ಮಾತು ಇವು ಬೇಡ, ಅಯುಕ್ತವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಲ್ಲದೆ ನಿಮ್ಮ ಮಧ್ಯದಲ್ಲಿ ಕೆಟ್ಟಮಾತುಗಳು ಇರಕೂಡದು. ನೀವು ಮೂರ್ಖತನದಿಂದ ಮಾತಾಡಕೂಡದು ಮತ್ತು ಹೊಲಸಾದ ಹಾಸ್ಯನುಡಿಗಳನ್ನು ಹೇಳಕೂಡದು. ಇವುಗಳು ನಿಮಗೆ ಯೋಗ್ಯವಾದವುಗಳಲ್ಲ. ಆದರೆ ನೀವು ದೇವರಿಗೆ ಸ್ತೋತ್ರ ಸಲ್ಲಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತವ್ಡೆ ನಸ್ತಾನಾ ತುಮ್ಚ್ಯಾ ಮದ್ದಿ ಬುರ್ಶಿ ಬೊಲ್ನಿ ರ್‍ಹಾತಲಿ ನಕ್ಕೊ ತುಮಿ ಪಿಶೆಪಾನಾನ್ ಬೊಲುನಕಾಸಿ, ಅನಿ ಬುರ್ಶಿ ಗೊಸ್ಟಿಯಾ ಸಾಂಗುನಕಾಸಿ ಹೆ ತುಮ್ಕಾ ಬರೆ ದಿಸಿನಾ, ಖರೆ ತುಮಿ ದೆವಾಕ್ ಧನ್ಯವಾದ್ ಮನ್ತಲೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:4
29 ತಿಳಿವುಗಳ ಹೋಲಿಕೆ  

ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!


ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.


ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II


ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ.


ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.


ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಬೆಂಕಿಕೊಳ್ಳಿಗಳನ್ನೂ ಕೊಲ್ಲುವ ಬಾಣಗಳನ್ನೂ ಬೀರುವ ದೊಡ್ಡ ಹುಚ್ಚನಿಗೆ ಸಮಾನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು