Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:5 - ಕನ್ನಡ ಸತ್ಯವೇದವು C.L. Bible (BSI)

5 ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆ ತುಮ್ಕಾ ಬರೆ ಕಳುನ್ ರ್‍ಹಾಂವ್ದಿತ್, ಲೈಂಗಿಕ್,ಬುರ್ಶಿಕಾಮಾ ಅನಿ, ಪೈಸ್ಯಾಚಿ ಅಸ್ಯಾ ಕರ್ತಲ್ಯಾಕ್ನಿ, ಕ್ರಿಸ್ತಾಚ್ಯಾ, ಅನಿ ದೆವಾಚ್ಯಾ ರಾಜ್ವಡ್ಕಿತ್ ಜಾಗೊಚ್ ನಾ ಸ್ವಾರ್ಥ್ ಪಾನ್ ಮುರ್ತಿಯಾಂಚಿ ಫುಜ್ಯಾ ಕರ್ತಲ್ಯಾಕ್ ಸಮಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:5
15 ತಿಳಿವುಗಳ ಹೋಲಿಕೆ  

ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು