Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:9 - ಕನ್ನಡ ಸತ್ಯವೇದವು C.L. Bible (BSI)

9 ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅದ್ಲ್ಯಾ ಕಾಲಾತ್ ತುಮಿ ಮೊಟೊ ಕಾಳೊಕ್ ಹೊವ್ನ್ ಹೊತ್ತ್ಯಾಸಿ, ಅತ್ತಾ ತರಿ ತುಮಿ ಕ್ರಿಸ್ತಾತ್ ಪುರಾ ಉಜ್ವೊಡಾತ್ಲೆ,ಅನಿ ಪುನ್ವೆಚ್ಯಾ ಉಜ್ವೊಡಾ ಸಾರ್ಕೆ ಹೊವ್ನ್ ಹಾಸಿ, ತಸೆ ಹೊವ್ನ್ ಉಜ್ವಡಾಕ್ ಮಿಳಲ್ಲ್ಯಾ ಬರ್‍ಯಾ ಪೊರಾಂಚ್ಯಾ ಸಾರ್ಕೆ ಜಿವನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:9
18 ತಿಳಿವುಗಳ ಹೋಲಿಕೆ  

ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು