Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:11 - ಕನ್ನಡ ಸತ್ಯವೇದವು C.L. Bible (BSI)

11 ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವಾ, ತನ್ನಾ ಗಿರೊ ಕರ್ತಲ್ಯಾ ಕುತಂತ್ರಾಂಚ್ಯಾ ವಿರೊಧ್ ತುಮ್ಕಾ ಝಗ್ಡೊ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:11
30 ತಿಳಿವುಗಳ ಹೋಲಿಕೆ  

ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.


ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:


ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು