Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:12 - ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶ್ಯಾಕ್ ಮಟ್ಲ್ಯಾರ್, ಅಮ್ಚೊ ಝಗ್ಡೊ ಲೊಕಾಕ್ನಿ ವಿರೊದ್ ಹೊವ್ನ್ ನ್ಹಯ್ ಖರೆ ಅಮಿ ಕಾಳ್ಕಾತ್ಲ್ಯಾ ಅಧಿಕಾರ್‍ಯಾಕ್ನಿ, ಅಧಿಪತಿಕ್ನಿ ಅನಿ ಹ್ಯಾ ಜಗಾಚ್ಯಾ ಕಾಳ್ಕಾಚ್ಯಾ ಬಳಾಕ್ನಿಅನಿ ಮಳ್ಬಾಚ್ಯಾ ಬುರ್ಶ್ಯಾ ಆತ್ಮ್ಯಾಂಚ್ಯಾ ಬಳಾಂಚ್ಯಾಬಿ ವಿರೊಧ್ ಹೊವ್ನ್ ಝಗ್ಡೊ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:12
25 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟು ಅದರ ನಿಯಮಗಳನ್ನು ಪಾಲಿಸದಿದ್ದರೆ ಬಹುಮಾನ ಗಳಿಸಲು ಸಾಧ್ಯವಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಸೈತಾನನೂ ಸಹ ಜ್ಯೋತಿರ್ಮಯ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು