Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:18 - ಕನ್ನಡ ಸತ್ಯವೇದವು C.L. Bible (BSI)

18 ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮಿ ಪವಿತ್ರ್ ಆತ್ಮ್ಯಾಚ್ಯಾ ಮಜ್ಜತಿನ್ ಸಗ್ಳ್ಯಾ ವೆಳಾರ್ಬಿ ದೆವಾಕ್ಡೆ ಮಾಗ್ನೆ ಕರುಂಗೆತ್, ಹರ್ ಎಕ್ ಮಾಗ್ನಿಬಿ ಕರಾ ತುಮ್ಕಾ ಪಾಜೆ ಹೊಲ್ಲೆ ಸಗ್ಳೆ ಮಾಗುನ್ ಘೆವಾ ಮಾಗ್ನೆ ಕರುಕ್ ಕನ್ನಾಬಿ ತಯಾರ್ ಹೊವ್ನ್ ರಾವಾ ಮಾಗ್ನೆ ಕರ್ತಲೆ ಸೊಡುನ್ ದಿವ್‍ನಕಾಸಿ, ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಸಗ್ಳ್ಯಾ ವೆಳಾರ್ಬಿ ಮಾಗ್ನೆ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:18
51 ತಿಳಿವುಗಳ ಹೋಲಿಕೆ  

ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.


ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.


ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.


ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ.


“ಹೇ ಸರ್ವೇಶ್ವರಾ, ನಿಮ್ಮ ದಾಸನಾದ ಅರಸನ ಮೇಲೆಯೂ ಪ್ರಜೆಗಳಾದ ಇಸ್ರಯೇಲರ ಮೇಲೆಯೂ ಕಟಾಕ್ಷವಿಟ್ಟು, ಅವರು ಪ್ರಾರ್ಥಿಸುವಾಗೆಲ್ಲಾ, ಅವರ ವಿಜ್ಞಾಪನೆಗಳನ್ನು ಆಲಿಸಿರಿ.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು.


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.


ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ನಾನು ಈಗ ನಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಅವರ ಜ್ಞಾಪಕದಲ್ಲಿರಲಿ.


ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?


ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ಮೆತೂಷಲ ಹನೋಕನಿಗೆ, ಹನೋಕ್ ಯೆರೆದನಿಗೆ, ಯೆರೆದ್ ಮಹಲಲೇಲನಿಗೆ, ಮಹಲಲೇಲ್ ಕಯಿನನಿಗೆ ಹುಟ್ಟಿದರು.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ನಗ್ಗಾಯ ಮಹಾಥನಿಗೆ, ಮಹಾಥ ಮತ್ತಥೀಯನಿಗೆ, ಮತ್ತಥೀಯ ಶಿಮಿಯಾನಿಗೆ, ಶಿಮಿಯಾ ಯೊಸೇಖನಿಗೆ ಹುಟ್ಟಿದರು.


ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು.


ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು. (ಈ ಬಗೆಯ ದೆವ್ವಗಳನ್ನು ಹೊರಗಟ್ಟಲು ಪ್ರಾರ್ಥನೆ ಮತ್ತು ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ),” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು