ಎಫೆಸದವರಿಗೆ 6:2 - ಕನ್ನಡ ಸತ್ಯವೇದವು C.L. Bible (BSI)2 ‘ನಿನ್ನ ತಂದೆತಾಯನ್ನು ಗೌರವಿಸು’ ಎಂಬುದು ವಾಗ್ದಾನದಿಂದ ಕೂಡಿದ ಮೊದಲನೆಯ ಆಜ್ಞೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.” ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದೆವಾಚ್ಯಾ ಹುಕುಮಾಚ್ಯಾ ಪೈಲೆಚ್ಯಾ ಗೊಸ್ಟಿ ಸಾರ್ಕೆ ತುಮಿ ತುಮ್ಚ್ಯಾ ಬಾಯ್ ಬಾಬಾಕ್ನಿ ಮಾನ್ ದಿವ್ಚೆ. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.