Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:23 - ಕನ್ನಡ ಸತ್ಯವೇದವು C.L. Bible (BSI)

23 ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಬಾಬಾ ದೆವಾಕ್ನಾ ಅನಿ ಧನಿಯಾ ಜೆಜು ಕ್ರಿಸ್ತಾಕ್ನಾ ತುಮ್ಕಾ ಶಾಂತ್ಪಾನ್ ಅನಿ ವಿಶ್ವಾಸಾನ್ ಭರಲೆ ಪ್ರೆಮ್ ಗಾಂವ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:23
21 ತಿಳಿವುಗಳ ಹೋಲಿಕೆ  

ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಅವನಿಗೆ ನನ್ನ ಹೆಸರಿನಲ್ಲಿ, ‘ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ!


ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು