ಎಸ್ತೇರಳು 1:10 - ಕನ್ನಡ ಸತ್ಯವೇದವು C.L. Bible (BSI)10 ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10-11 ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10-11 ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು. ಅಧ್ಯಾಯವನ್ನು ನೋಡಿ |
ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು.