Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:13 - ಕನ್ನಡ ಸತ್ಯವೇದವು C.L. Bible (BSI)

13 ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವಿಧಿನ್ಯಾಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:13
11 ತಿಳಿವುಗಳ ಹೋಲಿಕೆ  

ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);


ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.


ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.


ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.


ಜೆಬೂಲೂನ್ಯರಿಂದ: ನಿಷ್ಠೆಯುಳ್ಳ, ನಂಬಿಗಸ್ಥ, ಯುದ್ಧಮಾಡಲು ಸಿದ್ಧರಾದ, ಎಲ್ಲಾ ರೀತಿಯ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದ 50,000 ವೀರರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು