Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:16 - ಕನ್ನಡ ಸತ್ಯವೇದವು C.L. Bible (BSI)

16 ಅರಸನ ಮುಂದೆಯೂ ನೆರೆದಿದ್ದ ಪದಾಧಿಕಾರಿಗಳ ಮುಂದೆಯೂ ಇದಕ್ಕೆ ಉತ್ತರ ಈಯುತ್ತ ಮೆಮೂಕನು: “ವಷ್ಟಿರಾಣಿಯು ಬಗೆದಿರುವ ಅವಮಾನ ಅರಸನೊಬ್ಬನ ವಿರುದ್ಧ ಮಾತ್ರವಲ್ಲ, ಅರಸನ ರಾಜ್ಯದಲ್ಲಿರುವ ಎಲ್ಲಾ ಪದಾಧಿಕಾರಿಗಳ ಹಾಗೂ ಪ್ರಜೆಗಳ ವಿರುದ್ಧವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ವಷ್ಟಿರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದದ್ದಲ್ಲ; ಅರಸನಾದ ಅಹಷ್ವೇರೋಷನಿಗೆ ಸೇರಿರುವ ಎಲ್ಲಾ ಸಂಸ್ಥಾನಗಳ ಸರದಾರರಿಗೂ ಜನರಿಗೂ ವಿರುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, “ರಾಣಿ ವಷ್ಟಿಯು ತಪ್ಪು ಮಾಡಿದಳು. ಇದು ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೆಮೂಕಾನನು ಅರಸನ ಮುಂದೆಯೂ ಪ್ರಧಾನರ ಮುಂದೆಯೂ, “ವಷ್ಟಿ ರಾಣಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ಸಮಸ್ತ ಶ್ರೇಷ್ಠರಿಗೂ ಸಮಸ್ತ ಜನರಿಗೂ ಅಪರಾಧಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:16
6 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


“ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.


ಹೇಗೆಂದರೆ, ವಷ್ಟಿರಾಣಿಯ ಈ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬಂದು ಅವರೂ ತಮ್ಮ ಗಂಡಂದಿರನ್ನು ತಿರಸ್ಕಾರಭಾವದಿಂದ ಕಾಣತೊಡಗುವರು. ‘ಅಹಷ್ವೇರೋಷನು ರಾಣಿ ವಷ್ಟಿಗೆ ತನ್ನ ಮುಂದೆ ಬರಲು ಹೇಳಿಕಳುಹಿಸಿದನು; ಆದರೆ ಆಕೆ ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಹೀಯಾಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು