ಎಸ್ತೇರಳು 1:17 - ಕನ್ನಡ ಸತ್ಯವೇದವು C.L. Bible (BSI)17 ಹೇಗೆಂದರೆ, ವಷ್ಟಿರಾಣಿಯ ಈ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬಂದು ಅವರೂ ತಮ್ಮ ಗಂಡಂದಿರನ್ನು ತಿರಸ್ಕಾರಭಾವದಿಂದ ಕಾಣತೊಡಗುವರು. ‘ಅಹಷ್ವೇರೋಷನು ರಾಣಿ ವಷ್ಟಿಗೆ ತನ್ನ ಮುಂದೆ ಬರಲು ಹೇಳಿಕಳುಹಿಸಿದನು; ಆದರೆ ಆಕೆ ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಹೀಯಾಳಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರನ್ನು ತಿರಸ್ಕರಿಸುವದಕ್ಕೆ ಕಾರಣವಾಗುವದು. ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ ಅನ್ನುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೇಗೆಂದರೆ: ರಾಣಿಯು ಮಾಡಿದ್ದನ್ನು ರಾಜ್ಯದ ಇತರ ಸ್ತ್ರೀಯರು ಕೇಳಿ ತಾವೂ ತಮ್ಮ ಗಂಡಂದಿರಿಗೆ ಅವಿಧೇಯರಾಗುವರು. ಅವರು ತಮ್ಮ ಗಂಡಂದಿರಿಗೆ, ‘ರಾಜ ಅಹಷ್ವೇರೋಷನು ವಷ್ಟಿರಾಣಿಯನ್ನು ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದನು, ಆದರೆ ಆಕೆ ಬರಲಿಲ್ಲ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ರಾಣಿಯ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬರುವುದು. ‘ಅರಸನಾದ ಅಹಷ್ವೇರೋಷನು ವಷ್ಟಿರಾಣಿಯನ್ನು ತನ್ನ ಮುಂದೆ ಬರಲು ಹೇಳಿ ಕಳುಹಿಸಿದನು. ಆದರೆ ಅವಳು ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಅವರು ತಮ್ಮ ಗಂಡಂದಿರನ್ನೂ ತಿರಸ್ಕರಿಸುವರು. ಅಧ್ಯಾಯವನ್ನು ನೋಡಿ |