Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:19 - ಕನ್ನಡ ಸತ್ಯವೇದವು C.L. Bible (BSI)

19 ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರಸನು ಸಮ್ಮತಿಸುವದಾದರೆ ವಷ್ಟಿಯು ತಿರಿಗಿ ಅಹಷ್ವೇರೋಷ್‍ರಾಜನ ಸನ್ನಿಧಿಗೆ ಬರಲೇಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದ್ದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನೆಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:19
10 ತಿಳಿವುಗಳ ಹೋಲಿಕೆ  

ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.


ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು.


ಇದಲ್ಲದೆ, ರಾಣಿಯ ಈ ವರ್ತನೆಯ ಬಗ್ಗೆ ಕೇಳಿಸಿಕೊಂಡ ಪರ್ಷಿಯ, ಮೇದ್ಯ ದೇಶಗಳ ಕುಲೀನ ಸ್ತ್ರೀಯರೂ ಇದೇ ರೀತಿ ಅರಸರ ಪದಾಧಿಕಾರಿಗಳೊಂದಿಗೆ ವರ್ತಿಸುವರು. ಹೀಗೆ ತಿರಸ್ಕಾರವೂ ಕೋಪವೂ ಉಂಟಾಗುವುದು.


ಇದಾದ ಕೆಲವು ದಿನಗಳ ನಂತರ ಅರಸನ ಕೋಪವು ಶಾಂತವಾದಾಗ, ಅವನು ವಷ್ಟಿರಾಣಿಯನ್ನು, ಆಕೆಯ ವರ್ತನೆಯನ್ನು, ಆಕೆಯ ವಿರುದ್ಧ ತಾನು ನೀಡಿದ್ದ ತೀರ್ಪನ್ನು ಜ್ಞಾಪಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು