ಎಸ್ತೇರಳು 1:22 - ಕನ್ನಡ ಸತ್ಯವೇದವು C.L. Bible (BSI)22 ಪ್ರತಿಯೊಂದು ಕುಟುಂಬದಲ್ಲೂ ಪುರುಷನೇ ಅಧಿಕಾರ ವಹಿಸಬೇಕು, ಅವನು ಸ್ವಜನರ ಭಾಷೆಯಲ್ಲೇ ವ್ಯವಹಾರ ನಡೆಸಬೇಕು ಎಂದು ತನ್ನ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮುಖೇನ ಪ್ರಕಟಿಸಿದನು. ಇವು ಆಯಾ ಪ್ರಾಂತ್ಯಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲೂ ಬರೆಯಲಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು - ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿದ್ದು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕೆಂಬದಾಗಿ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಹಷ್ವೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡಸು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು. ಅಧ್ಯಾಯವನ್ನು ನೋಡಿ |