Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:8 - ಕನ್ನಡ ಸತ್ಯವೇದವು C.L. Bible (BSI)

8 ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪಾನಮಾಡುವದರಲ್ಲಿ ಯಾರಿಗೂ ಒತ್ತಾಯಮಾಡಬಾರದೆಂದು ಕ್ರಮವಿತ್ತು. ಪ್ರತಿಯೊಬ್ಬನಿಗೆ ಅವನವನ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು. ರಾಜಸೇವಕರು ಆ ಆಜ್ಞೆಯನ್ನು ಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:8
6 ತಿಳಿವುಗಳ ಹೋಲಿಕೆ  

ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.


ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.


ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು.


ವಷ್ಟಿರಾಣಿಯು, ಮಹಿಳೆಯರಿಗೋಸ್ಕರ ಅರಮನೆಯಲ್ಲಿ ಪ್ರತ್ಯೇಕ ಏರ್ಪಾಡು ಮಾಡಿಸಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು