Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 10:1 - ಕನ್ನಡ ಸತ್ಯವೇದವು C.L. Bible (BSI)

1 ಅರಸ ಅಹಷ್ವೇರೋಷನು ತನ್ನ ರಾಜ್ಯಕ್ಕೆ ಸೇರಿದ ಎಲ್ಲಾ ದೇಶಗಳ ಮೇಲೂ ಸಮುದ್ರ-ದ್ವೀಪಗಳ ಮೇಲೂ ತೆರಿಗೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ದೇಶಗಳಲ್ಲಿಯೂ ಸಮುದ್ರದ್ವೀಪಗಳಲ್ಲಿಯೂ ತೆರಿಗೆಯನ್ನು ಎತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 10:1
8 ತಿಳಿವುಗಳ ಹೋಲಿಕೆ  

ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಆಮೇಲೆ ಅವನು ಕರಾವಳಿಯ ನಾಡುಗಳ ಕಡೆಗೆ ಕಣ್ಣಿಟ್ಟು ಅಲ್ಲಿಯ ಅನೇಕ ನಾಡುಗಳನ್ನು ಆಕ್ರಮಿಸುವನು. ಆದರೆ ದಳವಾಯಿ ಒಬ್ಬನು ಅವನ ಅಟ್ಟಹಾಸವನ್ನು ತಡೆಗಟ್ಟುವನು. ಅವನು ಮಾಡುವ ಹಾನಿ ಅವನಿಗೇ ತಗಲುವಂತೆ ಮಾಡುವನು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು