Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 10:3 - ಕನ್ನಡ ಸತ್ಯವೇದವು C.L. Bible (BSI)

3 ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 10:3
17 ತಿಳಿವುಗಳ ಹೋಲಿಕೆ  

ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.


ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಯಿಮ್ ನಾಡಿನ ಜಿಕ್ರಿಯೆಂಬ ಶೂರನು ಕೊಂದನು.


ನೀನೇ ಅರಮನೆಯಲ್ಲಿ ಮುಖ್ಯಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರು ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದು ಹೇಳಿದನು.


ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು.


ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.


ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.


ಆದರೆ ಇಸ್ರಯೇಲರಿಗೆ ಹಾಗು ಯೆಹೂದ್ಯರಿಗೆ ದಾವೀದನ ಮೇಲೆ ಮಿಗಿಲಾದ ಪ್ರೀತಿ. ಏಕೆಂದರೆ ಅವನು ತಮ್ಮ ಸಂಗಡವೇ ಬಂದು ಮುಂದಾಳತ್ವ ವಹಿಸುತ್ತಿದ್ದನು.


ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು