Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:12 - ಕನ್ನಡ ಸತ್ಯವೇದವು C.L. Bible (BSI)

12 ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕನ್ಯೆಯರ ಲೇಪನಕಾಲವು ಪೂರೈಸುವದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ ಪರಿಮಳ ದ್ರವ್ಯ ಕಾಂತಿವರ್ಧಕ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳೂ ಅಂತೂ ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜಸ್ತ್ರೀಯರ ವಿಷಯವಾದ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸರದಿಯ ಪ್ರಕಾರ ಒಬ್ಬ ಕನ್ಯೆಯನ್ನು ಅರಸನ ಬಳಿಗೆ ಕರೆದೊಯ್ಯುವ ಮೊದಲು ಆಕೆಯು ಹನ್ನೆರಡು ತಿಂಗಳು ಕಾಲ ಸೌಂದರ್ಯೋಪಾಸನದ ವಿಧಿಕ್ರಮಗಳನ್ನೆಲ್ಲಾ ನೆರವೇರಿಸಿರಬೇಕು. ಆರುತಿಂಗಳ ಕಾಲ ರಕ್ತಬೋಳದ ಎಣ್ಣೆಯ ಅಭ್ಯಂಜನದಿಂದಲೂ ನಂತರದ ಆರುತಿಂಗಳು ಕಾಂತಿವರ್ಧಕ ಲೇಪನ, ಸುಗಂಧವಸ್ತುಗಳಿಂದ ಆಕೆಯು ಸೌಂದರ್ಯದ ಆರೈಕೆ ಮಾಡಿಸಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಸುಗಂಧ ತೈಲದಿಂದಲೂ ಆರು ತಿಂಗಳು ಸೌಂದರ್ಯವರ್ಧಕ ಸಾಧನಗಳಿಂದಲೂ ಕನ್ಯೆಯರ ಲೇಪನಕಾಲದ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇರೋಷನ ಬಳಿಗೆ ಪ್ರತಿಯೊಬ್ಬ ಕನ್ಯೆಯು ಹೋಗಲು ಅವರವರ ಸರದಿ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:12
10 ತಿಳಿವುಗಳ ಹೋಲಿಕೆ  

ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ.


ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.


ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.


ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು.


ಹೀಗೆ ತನ್ನ ಸರದಿ ಬಂದಾಗ ತನ್ನೊಡನೆ ತೆಗೆದುಕೊಂಡು ಹೋಗಲು ಇಷ್ಟಪಡುವುದನ್ನೆಲ್ಲಾ ಆಕೆಗೆ ಒದಗಿಸಲಾಗುತ್ತಿತ್ತು.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು