Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:14 - ಕನ್ನಡ ಸತ್ಯವೇದವು C.L. Bible (BSI)

14 ಆಕೆ ರಾಜನಿವಾಸಕ್ಕೆ ಸಾಯಂಕಾಲ ಹೋದವಳು ಮಾರನೆಯ ದಿನ ಬೆಳಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರಬೇಕಾಗಿತ್ತು. ಅರಸನು ಅವಳನ್ನು ಬಯಸಿ ಅವಳ ಹೆಸರು ಹಿಡಿದು ಕರೆಕಳುಹಿಸಿದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗುವಂತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು [ಮರುದಿನ] ಬೆಳಿಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರಿಸಿದರೆ ಹೊರತಾಗಿ ಒಬ್ಬಳೂ ಅರಸನ ಬಳಿಗೆ ತಿರಿಗಿ ಹೋಗುವ ಹಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಗಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಗಜನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರೆತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:14
8 ತಿಳಿವುಗಳ ಹೋಲಿಕೆ  

“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳು ಆಶಿಸುವಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ಹಣಕ್ಕೆ ಮಾರಲೂಬಾರದು, ಊಳಿಗದವಳಂತೆ ನಡೆಸಲೂಬಾರದು.


ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.


ಹೀಗೆ ತನ್ನ ಸರದಿ ಬಂದಾಗ ತನ್ನೊಡನೆ ತೆಗೆದುಕೊಂಡು ಹೋಗಲು ಇಷ್ಟಪಡುವುದನ್ನೆಲ್ಲಾ ಆಕೆಗೆ ಒದಗಿಸಲಾಗುತ್ತಿತ್ತು.


ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು